ಸಿದ್ದರಾಮಯ್ಯ ನಾನೇ ಸಿಎಂ ಎಂದಿದ್ದಕ್ಕೆ 17 ಸಚಿವರು ನೆಗೆದು ಬಿದ್ದರು – ಸಂಸದ ಶ್ರೀನಿವಾಸ್ ಪ್ರಸಾದ್​

ಹೆಚ್​.ಡಿ ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಎಂದು ಸಿದ್ದರಾಮಯ್ಯ ಎಂದಿದ್ದರು. ಆದರೆ ಜೆಡಿಎಸ್​ ಜೊತೆ ಅವರ ಹೈಕಮಾಂಡ್​ನೇ ಬೇಷರತ್ ಬೆಂಬಲ ಸೂಚಿಸಿತು. ಆಗ ಮಾಜಿ ಸಿಎಂಗೆ ಹವಮಾನವಾಯಿತು ಎಂದು ಸಂಸದ ಶ್ರೀನಿವಾಸ್​ ಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ಸಮ್ಮಿಶ್ರ ಸರ್ಕಾರದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗ ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಎಂದಿದ್ದರು ಸಿದ್ದರಾಮಯ್ಯ, ಆದರೆ ಫಲಿತಾಂಶ ಬಂದಾಗ ಏನಾಯಿತು. ಆಗ ಸಿದ್ದರಾಮಯ್ಯ ಕೈ ಕಟ್ಟಿಕೊಂಡು ನಿಂತಿದ್ದರು ಎಂದರು.

ಅಲ್ಲದೇ ಕಳೆದ ಚುನಾವಣೆ ವೇಳೆಯಲ್ಲಿ ಸಿದ್ದರಾಮಯ್ಯ ಅವರು ಮತ್ತೆ ನಾನೇ ಸಿಎಂ ಎಂದಿದ್ದಕ್ಕೆ 17 ಸಚಿವರು ತಮ್ಮ ಕ್ಷೇತ್ರದಲ್ಲಿ ನೆಗೆದು ಬಿದ್ದರು. ಈಗಲೂ ಅದನ್ನೇ ಹೇಳಿಕೊಂಡು ತಿರುಗುತ್ತಿದ್ದಾರೆ. ಅಂತಹ ಉತ್ಪ್ರೇಕ್ಷೆಯ ಮಾತುಗಳನ್ನು ಆಡುವುದು ಬಿಡಬೇಕು. ಇನ್ನು ಮುಖ್ಯಮಂತ್ರಿ ಆಗಿದ್ದುಕೊಂಡೇ ಕದ್ದು ಓಡಿ ಹೋಗಿ ಬಾದಾಮಿಯಲ್ಲಿ ಚುನಾವಣೆಗೆ ನಿಂತರು. ಸಿಎಂ ಆಗಿದ್ದುಕೊಂಡು 36 ಸಾವಿರ ಮತಗಳ ಅಂತರದಲ್ಲಿ ಹೀನಾಯವಾಗಿ ಸೋತಿರಿ. ನಿಮಗೆ ಮಾನ ಮರ್ಯಾದೆ ಇದೆಯಾ? ಎಂದು ಅವರು ಶ್ರೀನಿವಾಸ್ ಅವರು ಹರಿಹಾಯ್ದರು. ಅಂತೆಯೇ ಮಾತನಾಡಿದ ಅವರು, ಮಾಜಿ ಸಿಎಂ ಅವರು ಮುಂದಿನ ಬಾರಿ ನಾನೇ ಅಂಬಾರಿಗೆ ಪುಷ್ಪಾರ್ಚನೆ ಮಾಡುತ್ತೇನೆ ಎಂದಿದ್ದರು. ಆದರೆ ಮುಂದೆ ಏನಾಯ್ತು. ಸಿದ್ದರಾಮಯ್ಯಗೆ ಎಲ್ಲಿಯೂ ನೆಲೆಯಿಲ್ಲ ಎಂದು ಸಂಸದ ಶ್ರೀನಿವಾಸ್​ ಪ್ರಸಾದ್ ಅವರು ಮಾತಿನೂದ್ದಕ್ಕೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಆಡಿಯೋ ಅಸ್ತ್ರಕ್ಕೆ ಅನರ್ಹ ಶಾಸಕರು ಪ್ರತ್ಯಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಧರ್ಮಸ್ಥಳದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದ ವಿಡಿಯೋವನ್ನು ಸುಪ್ರೀಂಕೋರ್ಟಿಗೆ ಸಲ್ಲಿಸುವ ಸಾಧ್ಯತೆಗಳಿವೆ. ಸಿಎಂ ಯಡಿಯೂರಪ್ಪನವರು ಮಾತನಾಡಿದ್ದ ಆಡಿಯೋಗೆ ಸಂಬಂಧಿಸಿದಂತೆ ಮಂಗಳವಾರ ಸುಪ್ರೀಂಕೋರ್ಟಿನಲ್ಲಿ ವಿಚಾರಣೆ ನಡೆಯಲಿದೆ. ಈ ಹಿಂದೆ ಧರ್ಮಸ್ಥಳದ ಶಾಂತಿವನದಲ್ಲಿ ಲೋಕಸಭಾ ಚುನಾವಣೆ ಬಳಿಕ ಮೈತ್ರಿ ಸರ್ಕಾರ ಇರಲ್ಲ ಎಂದು ಹೇಳಿದ್ದ ವಿಡಿಯೋ ಬಿಡುಗಡೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯನವರೇ ಕಾರಣ. ಈ ವಿಡಿಯೋವನ್ನು ಅಸ್ತçವಾಗಿ ಬಿಜೆಪಿ ಪರ ವಕೀಲರು ಬಳಸಿಕೊಳ್ಳುವ ಸಾಧ್ಯತೆಗಳಿವೆ.

ಯಡಿಯೂರಪ್ಪನವರ ಆಡಿಯೋಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ನಾಯಕರು ಕಾರಣ ಎಂದು ಕಾಂಗ್ರೆಸ್ ಆರೋಪಿಸಿತ್ತು. ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹುಬ್ಬಳ್ಳಿ ಸಭೆ ಆಡಿಯೋದಲ್ಲಿರುವ ಧ್ವನಿ ನನ್ನದೇ ಎಂದು ಒಪ್ಪಿಕೊಂಡಿದ್ದ ಸಿಎಂ, ಭಾನುವಾರ ಅನರ್ಹ ಶಾಸಕರಿಗೂ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲಿಗೆ ಮುಂದಾಗಿದ್ದರು.

Leave a Reply

Your email address will not be published. Required fields are marked *